Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಡವರ ಬದುಕಿಗೆ ಬುಲ್ಡೋಜರ್ ದಾಳಿ: ಸರ್ಕಾರದ ನೀತಿಗೆ ಆಕ್ರೋಶ

    2 weeks ago

    ದಾವಣಗೆರೆ : ಬೆಂಗಳೂರು ಉತ್ತರ ತಾಲೂಕಿನ ಕೋಗಿಲು ಲೇಔಟ್ ಪ್ರದೇಶದಲ್ಲಿ ಬಡವರ ಮನೆಗಳನ್ನು ಧ್ವಂಸಗೊಳಿಸಿ ನೂರಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿಸಿರುವ ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನಗರದ ಅಕ್ತರ್ ರಜಾ ಸರ್ಕಲ್ ಬಳಿ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ದಾವಣಗೆರೆ ಜಿಲ್ಲಾ ಅಧ್ಯಕ್ಷ  ಎ.ಆರ್. ತಾಹೀರ್, ಬೆಂಗಳೂರು ಫಕೀರ್ ಕಾಲೋನಿ, ವಸೀಂ […]

    ದಾವಣಗೆರೆ : ಬೆಂಗಳೂರು ಉತ್ತರ ತಾಲೂಕಿನ ಕೋಗಿಲು ಲೇಔಟ್ ಪ್ರದೇಶದಲ್ಲಿ ಬಡವರ ಮನೆಗಳನ್ನು ಧ್ವಂಸಗೊಳಿಸಿ ನೂರಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿಸಿರುವ ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನಗರದ ಅಕ್ತರ್ ರಜಾ ಸರ್ಕಲ್ ಬಳಿ ಭಾರೀ ಪ್ರತಿಭಟನೆ ನಡೆಯಿತು.
    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ದಾವಣಗೆರೆ ಜಿಲ್ಲಾ ಅಧ್ಯಕ್ಷ  ಎ.ಆರ್. ತಾಹೀರ್, ಬೆಂಗಳೂರು ಫಕೀರ್ ಕಾಲೋನಿ, ವಸೀಂ ಲೇಔಟ್ ಹಾಗೂ ಕೋಗಿಲು ಬಡಾವಣೆಯ ಬಡವರ ಮನೆಗಳ ಮೇಲೆ ಯಾವುದೇ ಪೂರ್ವ ಸೂಚನೆ ನೀಡದೆ ಬುಲ್ಡೋಜರ್ ಚಲಾಯಿಸಿರುವುದು ಸರ್ಕಾರದ ಬಡವರ ವಿರೋಧಿ ಹಾಗೂ ಅಮಾನವೀಯ ನೀತಿಯ ಜೀವಂತ ಉದಾಹರಣೆಯಾಗಿದೆ ಎಂದು ಕಿಡಿಕಾರಿದರು.
    ಇದು ಆಡಳಿತವಲ್ಲ, ಅಕ್ರಮ ದಾಳಿ. ಇದು ಕೇವಲ ಮಾನವೀಯ ವಿಫಲತೆ ಮಾತ್ರವಲ್ಲ, ಭಾರತದ ಸಂವಿಧಾನಕ್ಕೆ ಮಾಡಿದ ನೇರ ಅವಮಾನ” ಎಂದು ಅವರು ತೀವ್ರವಾಗಿ ಟೀಕಿಸಿದರು.
    ಡಿಸೆಂಬರ್ 20ರ ಬೆಳಗಿನ ಜಾವ ಸುಮಾರು 4:15ಕ್ಕೆ ಯಾವುದೇ ಮುನ್ಸೂಚನೆ ನೀಡದೇ ಭೂಗರ್ಭ ಯಂತ್ರಗಳ ಮೂಲಕ ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಮನೆ ಖಾಲಿ ಮಾಡದಿದ್ದರೆ ಪರಿಣಾಮ ಎದುರಿಸಬೇಕೆಂದು ಬೆದರಿಕೆ ಹಾಕಲಾಗಿದೆ. ದಾಖಲೆಗಳು, ಹಣ ಹಾಗೂ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲು ಸಹ ಅವಕಾಶ ನೀಡಲಾಗಿಲ್ಲ. 30 ವರ್ಷಗಳಿಗೂ ಅಧಿಕ ಕಾಲ ಒಂದೇ ವಸಾಹತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಸುಮಾರು 400ಕ್ಕೂ ಹೆಚ್ಚು ಕುಟುಂಬಗಳನ್ನು ಯಾವುದೇ ಪರಿಹಾರ, ಪುನರ್ವಸತಿ ಅಥವಾ ಪರ್ಯಾಯ ವ್ಯವಸ್ಥೆ ಇಲ್ಲದೆ ಕಠಿಣ ಚಳಿಗಾಲದ ರಾತ್ರಿಗಳನ್ನು ತೆರೆದ ಆಕಾಶದ ಕೆಳಗೆ ಕಳೆಯುವ ಸ್ಥಿತಿಗೆ ತಳ್ಳಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
    ಜಿಲ್ಲಾ ಉಪಾಧ್ಯಕ್ಷರಾದ ರಜ್ವಿ ರಿಯಾಝ್ ಅಹಮದ್ ಮಾತನಾಡುತ್ತಾ,  ಇನ್ಫೋಸಿಸ್ ಸಂಸ್ಥೆಗೆ ನೀಡಲಾಗಿದ್ದ 53.5 ಎಕರೆ KIADB ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ದುರುಪ ಯೋಗಪಡಿಸಿ ಕೊಂಡಿರುವ ಗಂಭೀರ ಅಕ್ರಮದ ಕುರಿತು ಸರ್ಕಾರ ಸಂಪೂರ್ಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ಹೇಳಿದರು.
    ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಮೋಸಿನ್ ಮಾತನಾಡಿ, ಎಸ್‌ಡಿಪಿಐ ನಡೆಸಿದ ಹೋರಾಟ, ಪ್ರತಿಭಟನೆ ಹಾಗೂ ಜನಪರ ಒತ್ತಡದ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ಲೇಔಟ್ ಧ್ವಂಸದಿಂದ ನಿರಾಶ್ರಿತರಾದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ. ಇದನ್ನು ಎಸ್‌ಡಿಪಿಐ ಸ್ವಾಗತಿಸುತ್ತದೆ. ಆದರೆ ಭರವಸೆಗಳ ಮೇಲೆ ಬದುಕು ಕಟ್ಟಲಾಗುವುದಿಲ್ಲ. ಜನರಿಗೆ ಬೇಕಾಗಿರುವುದು ತಕ್ಷಣದ ಪರಿಹಾರ, ಸಮರ್ಪಕ ಪುನರ್ವಸತಿ ಹಾಗೂ ಶಾಶ್ವತ ಮನೆಗಳು. ಈ ಭರವಸೆ ಕೇವಲ ಹೇಳಿಕೆಯಾಗದೆ ತಕ್ಷಣ ಕಾರ್ಯರೂಪಕ್ಕೆ ಬರಬೇಕು ಎಂದು ಅವರು ಆಗ್ರಹಿಸಿದರು.
    ಈ ಸಂದರ್ಭದಲ್ಲಿ ಜಿಲ್ಲಾ ಕೋಶಾಧಿಕಾರಿ ಮೊಹಮ್ಮದ್ ಅಜರುದ್ದೀನ್, ಜಿಲ್ಲಾ ಸಮಿತಿ ಸದಸ್ಯರಾದ ಯಹಿಯ, ಸೈಯದ್ ರೆಹಮಾನ್ ಸಾಬ್, ಫಯಾಜ್ ಬೇಗ್, ಜಬಿ ಆಝಾದ್ ನಗರ, ಎಸ್ ಡಿ ಪಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಏಜಾಜ್ ಅಹಮದ್, ಹರಿಹರ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಮಿ ಮುಜವರ್, ಕಾರ್ಯಕರ್ತರು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು.
    Click here to Read More
    Previous Article
    ಸಿರಿಧಾನ್ಯ ಪಾಕಗಳು ಬಾಯಲ್ಲಿ ನೀರೂರಿಸಿದವು:ಗಿತ್ತೆ ಮಾಧವ ವಿಠ್ಠಲ್‍ರಾವ್
    Next Article
    ಬ್ಯಾಂಕ್ ನೌಕರರ ಪ್ರತಿಭಟನಾ ಮತಪ್ರದರ್ಶನ

    Related ತಾಜಾ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment