Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ : ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

    2 weeks ago

    ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಎದುರು ಬ್ಯಾನರ್ ಕಟ್ಟುವ ವಿಷಯಕ್ಕೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ‘ಗುಂಡು ತಾಗಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮೃತಪಟ್ಟಿದ್ದಾರೆ. ಜನಾರ್ದನ ರೆಡ್ಡಿ ಅವರ ಕಡೆಯಿಂದ ದಾಳಿ ನಡೆದಿದೆ’ಎಂದು ಶಾಸಕ ಭರತ್ ರೆಡ್ಡಿ ಆರೋಪಿಸಿದ್ದಾರೆ. ಘಟನೆಯಿಂದ ಬಳ್ಳಾರಿ ಉದ್ವಿಗ್ನಗೊಂಡಿದ್ದು, ನಿಷೇಧಾಜ್ಞೆ […]

    The post ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ : ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ appeared first on nudikarnataka.



    ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಎದುರು ಬ್ಯಾನರ್ ಕಟ್ಟುವ ವಿಷಯಕ್ಕೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

    ‘ಗುಂಡು ತಾಗಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮೃತಪಟ್ಟಿದ್ದಾರೆ. ಜನಾರ್ದನ ರೆಡ್ಡಿ ಅವರ ಕಡೆಯಿಂದ ದಾಳಿ ನಡೆದಿದೆ’ಎಂದು ಶಾಸಕ ಭರತ್ ರೆಡ್ಡಿ ಆರೋಪಿಸಿದ್ದಾರೆ. ಘಟನೆಯಿಂದ ಬಳ್ಳಾರಿ ಉದ್ವಿಗ್ನಗೊಂಡಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ‘ಜನಾರ್ದನ ರೆಡ್ಡಿ ಅವರ ಮನೆ ಎದುರಿನ ಜಾಗದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಮೊದಲಿಗೆ ಜಗಳ ಆರಂಭವಾಗಿದೆ. ಭರತ್ ರೆಡ್ಡಿ ಬೆಂಬಲಿಗ ಎನ್ನಲಾದ ಸತೀಶ್ ರೆಡ್ಡಿಯು ಜನಾರ್ದನ ರೆಡ್ಡಿ ಅವರ ಮನೆ ಎದುರು ರಸ್ತೆಯಲ್ಲಿ ಕುರ್ಚಿ ಹಾಕಿಕೊಂಡು ಕೂತು ದರ್ಪದಿಂದ ಬ್ಯಾನರ್ ಕಟ್ಟಿಸಿದರು. ಆಗ ಮಾಜಿ ಸಚಿವ ಶ್ರೀರಾಮುಲು ಅಡ್ಡ ಬಂದರು. ಈ ಕಾರಣಕ್ಕೆ ಎರಡು ಬಣಗಳ ನಡುವೆ ಮೊದಲಿಗೆ ಮಾತಿನ ಚಕಮಕಿ ನಡೆದು, ನಂತರ ಕಲ್ಲು ತೂರಾಟ ನಡೆದಿದೆ’ ಎಂದು ದೂರಲಾಗಿದೆ.

    ಈ ವಿಷಯ ತಿಳಿದು ಜನಾರ್ದನ ರೆಡ್ಡಿ ಅವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಸತೀಶ್ ರೆಡ್ಡಿ ಆಪ್ತ ಗನ್‌ಮ್ಯಾನ್‌ಗಳು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಗೊತ್ತಾಗಿದೆ. ವಿಷಯ ತಿಳಿದು ಮಾಜಿ ಸಚಿವ ಶ್ರೀರಾಮುಲು ಅವರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಿದರು. ಆದರೆ, ಪರಿಸ್ಥಿತಿ ಹತೋಟಿಗೆ ಬರಲಿಲ್ಲ.

    ಘಟನೆ ಏನು?: ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗರೆನ್ನಲಾದ ಸಾವಿರಕ್ಕೂ ಹೆಚ್ಚು ಮಂದಿ ನಗರದ ಎಸ್ಪಿ ಸರ್ಕಲ್‌ನಿಂದ ಜನಾರ್ದನ ರೆಡ್ಡಿ ಮನೆಗೆ ದೊಣ್ಣೆ, ಕಲ್ಲುಗಳೊಂದಿಗೆ ಬಂದು ದಾಳಿ ನಡೆಸಿದರು. ಆಗ ಜನಾರ್ದನ ರೆಡ್ಡಿಯವರ ಮನೆ ಕಿಟಕಿ ಗಾಜುಗಳು ಹಾನಿಗೀಡಾದವು. ಆದರೆ, ಪೊಲೀಸರು ಮಧ್ಯಪ್ರವೇಶಿಸಿ, ಪರಿಸ್ಥಿತಿ ನಿಭಾಯಿಸಿದರು. ಜನರನ್ನು ಚದುರಿಸಲು ಪೊಲೀಸರು ಸಹ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.

    ಘಟನೆ ಕುರಿತು ಸುದ್ದಿಗಾರರ ಜೊತೆ ಜನಾರ್ದನ ರೆಡ್ಡಿ ಮಾತನಾಡಿ, ‘ಬ್ಯಾನರ್ ವಿಷಯಕ್ಕೆ ಗಲಾಟೆ ಆಗುತ್ತಿರುವ ಸುದ್ದಿ ಗೊತ್ತಾದ ಕೂಡಲೇ ಮನೆಗೆ ಬಂದೆ. ಆಗ ನನ್ನ ಮೇಲೆ ಗುಂಡು ಹಾರಿಸುವ ಪ್ರಯತ್ನ ನಡೆಯಿತು’ ಎಂದು ಆರೋಪಿಸಿದರು.

    ‘ಶಾಸಕರಾಗಿ ಆಯ್ಕೆಯಾಗಿ ಎರಡೂವರೆ ವರ್ಷ ಕಳೆದರೂ ಭರತ್ ರೆಡ್ಡಿ ಅವರಿಗೆ ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗಿಲ್ಲ. ಅವರ ವಿರುದ್ಧ ಆಡಳಿತ ವಿರೋಧಿ ಅಲೆ ಇರುವುದರಿಂದ ವಾಲ್ಮೀಕಿ ಪ್ರತಿಮೆಯನ್ನು ಸ್ಥಾಪಿಸುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ಪ್ರಯತ್ನ ನಡೆಸಿದ್ದಾರೆ’ ಎಂದರು.

    ‘ಶಾಸಕ ಭರತ್ ರೆಡ್ಡಿ ಅವರ ತಂದೆ ನಾರಾಯಣ ರೆಡ್ಡಿ ದೊಡ್ಡ ಕ್ರಿಮಿನಲ್. ಇಂಥ ಶಾಸಕರನ್ನು ಕಟ್ಟಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ರೌಡಿಗಳ ಸಾಮ್ರಾಜ್ಯ ಕಟ್ಟುತ್ತಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲಿಸಲು ಕಷ್ಟವಾಗುತ್ತಿರುವ ಕಾರಣಕ್ಕೆ ಇಂದಿನ ಎಸ್ಪಿ ಶೋಭಾರಾಣಿ ಸ್ವತಃ ವರ್ಗಾವಣೆ ಮಾಡಿಸಿಕೊಂಡು ಬೇರೆ ಜಿಲ್ಲೆಗೆ ಹೋಗಿದ್ದಾರೆ ಎಂದು ಅವರು ಹೇಳಿದರು.

    ಗಲಾಟೆ ಯಾಕೆ?

    ಬಳ್ಳಾರಿಯ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗಿದೆ. ಜನವರಿ 3ರಂದು ಪ್ರತಿಮೆ‌ ಅನಾವರಣ ಮಾಡಲು ಸಿದ್ಧತೆ ನಡೆಸಲಾಗಿದೆ.

    ಈ ಕಾರ್ಯಕ್ರಮಕ್ಕಾಗಿ ನಗರದಾದ್ಯಂತ ಬ್ಯಾನರ್ ಅಳವಡಿಕೆ ಮಾಡಲಾಗುತ್ತಿದೆ. ಬ್ಯಾನರ್‌ ಅನ್ನು ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಅಳವಡಿಸುವ ಸಂದರ್ಭದಲ್ಲಿ ಈ ಗಲಾಟೆ ನಡೆದಿದೆ.

    ಬಳ್ಳಾರಿಯಲ್ಲಿ ತಡರಾತ್ರಿಯೂ ಬಿಗುವಿನ ವಾತಾವರಣ ಮುಂದುವರಿದಿತ್ತು. ನಗರದ ಸಿರುಗುಪ್ಪ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ.

    ಈ ನಡುವೆ ಶಾಸಕ ಜನಾರ್ದನ ರೆಡ್ಡಿ ಬಂಧನಕ್ಕೆ ಆಗ್ರಹಿಸಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಗರದ ಅವಂಬಾವಿಯಲ್ಲಿರುವ ಜನಾರ್ದನ ರೆಡ್ಡಿ ನಿವಾಸದ ಎದುರೇ ಗುರುವಾರ ರಾತ್ರಿ ಧರಣಿ ಕುಳಿತರು.

    ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್

    ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ವಾಲ್ಮೀಕಿ ಪುತ್ತಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    The post ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ : ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ appeared first on nudikarnataka.

    Click here to Read More
    Previous Article
    ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
    Next Article
    ಮಂಡ್ಯ ನಗರದ ವಾಹನ ದಟ್ಟಣೆ ಕುರಿತು ವರದಿ ಸಿದ್ಧಪಡಿಸಿ : ಡಾ.ಕುಮಾರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment