Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಗಾಂಜಾ ಮಾರಾಟ, ಐಪಿಎಲ್ ಬೆಟ್ಟಿಂಗ್ ನಿಯಂತ್ರಣಕ್ಕೆ ಕ್ರಮ : ಎಸ್ಪಿ ಶೋಭಾರಾಣಿ

    2 weeks ago

    ಗಾಂಜಾ ಡ್ರಗ್ಸ್ ಚಟುವಟಿಕೆಗಳು ಹಾಗೂ ಐಪಿಎಲ್ ಬೆಟ್ಟಿಂಗ್ ಗಳು ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ಇದೆ, ಈ ಬಗ್ಗೆ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಅವುಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದು ಮಂಡ್ಯ ಜಿಲ್ಲಾ ನೂತನ ಎಸ್ಪಿ ಶೋಭಾರಾಣಿ ತಿಳಿಸಿದರು.Action to control IPL betting: SP Sobharani ಮಂಡ್ಯ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, 15 ವರ್ಷಗಳ ನನ್ನ ಸೇವಾ ಅವಧಿಯಲ್ಲಿ ಮಂಡ್ಯ ಜಿಲ್ಲೆಯಲ್ಲೇ ಮೂರೂವರೆ ವರ್ಷ […]

    The post ಗಾಂಜಾ ಮಾರಾಟ, ಐಪಿಎಲ್ ಬೆಟ್ಟಿಂಗ್ ನಿಯಂತ್ರಣಕ್ಕೆ ಕ್ರಮ : ಎಸ್ಪಿ ಶೋಭಾರಾಣಿ appeared first on nudikarnataka.



    ಗಾಂಜಾ ಡ್ರಗ್ಸ್ ಚಟುವಟಿಕೆಗಳು ಹಾಗೂ ಐಪಿಎಲ್ ಬೆಟ್ಟಿಂಗ್ ಗಳು ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ಇದೆ, ಈ ಬಗ್ಗೆ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಅವುಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದು ಮಂಡ್ಯ ಜಿಲ್ಲಾ ನೂತನ ಎಸ್ಪಿ ಶೋಭಾರಾಣಿ ತಿಳಿಸಿದರು.Action to control IPL betting: SP Sobharani

    ಮಂಡ್ಯ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, 15 ವರ್ಷಗಳ ನನ್ನ ಸೇವಾ ಅವಧಿಯಲ್ಲಿ ಮಂಡ್ಯ ಜಿಲ್ಲೆಯಲ್ಲೇ ಮೂರೂವರೆ ವರ್ಷ ಕೆಲಸ ಮಾಡಿದ್ದೇನೆ. ಈ ಹಿಂದೆ ಮಂಡ್ಯ ಡಿವೈಎಸ್‌ಪಿ ಮತ್ತು ಎಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿರುವ ಅನುಭವವಿದೆ. ಇದೀಗ ಎಸ್ಪಿಯಾಗಿ ಪುನಃ ಮಂಡ್ಯಗೆ ವರ್ಗಾವಣೆಯಾಗಿ ಬಂದಿದ್ದೇನೆ ಎಂದರು.

    ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ

    ‘ಐಪಿಎಲ್ ಬೆಟ್ಟಿಂಗ್, ಇಸ್ಪೀಟ್ ದಂಧ ಮತ್ತು ಅಕ್ರಮ ಮದ್ಯ ಮಾರಾಟ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನ ಮಾಡುತ್ತೇನೆ. ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ ಸಾರ್ವಜನಿಕರು ಮುಕ್ತವಾಗಿ ದೂರು ಸಲ್ಲಿಸಿ, ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ದೂರು ಕೊಟ್ಟವರ ಹೆಸರನ್ನು ಗೋಪ್ಯವಾಗಿಡಲಾಗುವುದು’ ಎಂದರು.

    ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಆದ್ಯತೆ ನೀಡಲಾಗುವುದು. ಹೆಣ್ಣು ಭ್ರೂಣ ಹತ್ಯೆ, ಸರಗಳ್ಳತನ ಕೃತ್ಯಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತೇನೆ. ಅಬಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿ, ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ತಿಳಿಸಿದರು.

    ಮಂಡ್ಯ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ, ಪಾರ್ಕಿಂಗ್ ಸಮಸ್ಯೆ, ಪಾದಚಾರಿ ಮಾರ್ಗ ಒತ್ತುವರಿ ಬಗ್ಗೆ ಮಾಧ್ಯಮದವರು ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ದುರಸ್ತಿ ಮತ್ತು ಎಎಂಸಿ ಮುಗಿದಿದ್ದರೆ, ಟೆಂಡರ್ ಕರೆದು ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತೇನೆ. ‘ಪಬ್ಲಿಕ್ ಸೇಫ್ಟಿ ಆ್ಯಕ್ಟ್’ ಯೋಜನೆಯಡಿ ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮವಹಿಸುತ್ತೇನೆ ಎಂದರು.

    ‘ಬಳ್ಳಾರಿಯ ಶಾಸಕ ಜನಾರ್ದನ ರೆಡ್ಡಿ ಅವರ ಮಾತುಗಳಿಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬಳ್ಳಾರಿಯಲ್ಲಿದ್ದಾಗ ದಕ್ಷತೆಯಿಂದ ಕೆಲಸ ಮಾಡಿದ ಅತ್ಮತೃಪ್ತಿ ತಮಗಿದೆ. ಅಲ್ಲಿನ ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಬಳ್ಳಾರಿಯ ಜನರು ಮುಗ್ಧರು ಮತ್ತು ಒಳ್ಳೆಯವರು. ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡಿದ್ದು ತೃಪ್ತಿ ತಂದಿದೆ’ ಎಂದರು.

    The post ಗಾಂಜಾ ಮಾರಾಟ, ಐಪಿಎಲ್ ಬೆಟ್ಟಿಂಗ್ ನಿಯಂತ್ರಣಕ್ಕೆ ಕ್ರಮ : ಎಸ್ಪಿ ಶೋಭಾರಾಣಿ appeared first on nudikarnataka.

    Click here to Read More
    Previous Article
    Bank Holidays: 2026ರ ಮೊದಲ ತಿಂಗಳಲ್ಲೇ ಸಾಲು ಸಾಲು ರಜೆ, ಕರ್ನಾಟಕದ ಬ್ಯಾಂಕ್ ಆಧಾರಿತ ರಜೆ ಎಷ್ಟು?
    Next Article
    ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಸ್ವಾಗತ ಸಮಿತಿ ಅನುಮತಿ ನೀಡಿಲ್ಲ: ಯಶ್ಪಾಲ್ ಸುವರ್ಣ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment