ಬೆಂಗಳೂರು,ಜನವರಿ,5,2026 (www.justkannada.in): ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ. ಭಾರತದ ಸರ್ಕಾರದ ‘ಮೇಕ್ […]
The post ಎನ್ ಐಎಎಲ್ ಗೆ ‘ರನ್ ವೇ ಕ್ಲೀನಿಂಗ್ ವಾಹನ’ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಬೆಂಗಳೂರು,ಜನವರಿ,5,2026 (www.justkannada.in): ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.
ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ. ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲ್ಯಾಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.
ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ ವಾಹನ ಮಾಡಲಿದೆ. ದೂಳನ್ನೂ ಹೀರಿಕೊಳ್ಳಲಿದೆ. ಜೊತೆಗೆ, ಮುಖ್ಯವಾಗಿ ವಿಮಾನಗಳು ಇಳಿಯುವಾಗ ರನ್ ವೇಯಲ್ಲಿ ಜಾರುವ ಸಾಧ್ಯತೆ ತಂದೊಡ್ಡಬಹುದಾದ ಪಾಚಿಯನ್ನು ತೆಗೆದುಹಾಕುವ ಕಾರ್ಯವನ್ನು ಇದು ನಿರ್ವಹಿಸಲಿದೆ.
ನಗರದ ರಸ್ತೆಗಳನ್ನು ಸ್ವಚ್ಛ ಮಾಡುವ ಸ್ವೀಪಿಂಗ್ ಮಿಷಿನ್ ವಾಹನಗಳ ತಯಾರಿಕೆಗೂ ಗಮನ ಕೇಂದ್ರೀಕರಿಸಿರುವ ಆನ್ ಲಾನ್ ನಂತಹ ಕಂಪನಿಗಳು ನಮ್ಮ ಪೂರೈಕೆ ಸರಪಳಿಯ ಬುನಾದಿಯಾಗಿವೆ. ಆನ್ ಲಾನ್ ಕಂಪನಿಯು ಸರ್ಕಾರದ ನೀತಿಗಳು ಹಾಗೂ ಕಾರ್ಯಪರಿಸರವನ್ನು ಬಳಸಿಕೊಂಡು ಈಗ ತಯಾರಿಸಿರುವ ವಾಹನಕ್ಕೆ ರಫ್ತು ಮಾರುಕಟ್ಟೆಗಳನ್ನು ಶೋಧಿಸಿಕೊಳ್ಳಬೇಕು. ನಮ್ಮ ಕೈಗಾರಿಕಾ ನೀತಿಯು (2025-30) ಗುರಿ ನಿರ್ದೇಶಿತ ಬೆಂಬಲ ಹಾಗೂ ಗುಣಮಟ್ಟ ಪ್ರಮಾಣಪತ್ರ ಪ್ರೋತ್ಸಾಹಕ ಕ್ರಮಗಳ ಮೂಲಕ ಆನ್ ಲಾನ್ ನಂತಹ ಕಂಪನಿಗಳಿಗೆ ಉತ್ತೇಜನ ನೀಡುತ್ತದೆ ಎಂದರು.
ಕಾರ್ಯಕ್ರಮದ ನಂತರದ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಎಂ.ಬಿ ಪಾಟೀಲ್ ಫಾಕ್ಸ್ ಕಾನ್ ಕಂಪನಿಯು ಸದ್ಯ 30,000 ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ 80ರಷ್ಟು ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವ ಎಂ.ಬಿ ಪಾಟೀಲ್ ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸಲಾಗುವುದು ಎಂದು ಭರವಸೆ ನೀಡಿದರು.
ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಉನ್ನಿಕೃಷ್ಣನ್ ನಾಯರ್ ಪಿ.ಎಂ ಮಾತನಾಡಿದರು. ಮಾಜಿ ಶಾಸಕ ವೆಂಕಟರಮಣ, ಲೆಕ್ಕಪರಿಶೋಧಕ ಜಿ.ಜಿ.ಪಾಟೀಲ, ನೋಯ್ದಾ ವಿಮಾನ ನಿಲ್ದಾಣದ ಲೀಡ್ ಗ್ರೌಂಡ್ ವಿನೋದ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
Key words: Minister, M.B. Patil, Runway Cleaning Vehicle, NIAL
The post ಎನ್ ಐಎಎಲ್ ಗೆ ‘ರನ್ ವೇ ಕ್ಲೀನಿಂಗ್ ವಾಹನ’ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
Previous Article
ಕೊಲಂಬಿಯಾ, ಕ್ಯೂಬಾ, ಮೆಕ್ಸಿಕೊ, ಗ್ರೀನ್‌ಲ್ಯಾಂಡ್‌ಗೂ ಟ್ರಂಪ್ ಬೆದರಿಕೆ
Next Article
ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು