Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದಾಗ ಅಪಘಾತ ತಡೆಯಲು ಸಾಧ್ಯ: ಮನು ಪಟೇಲ್ ಬಿ.ವೈ

    1 week ago

    ಉಡುಪಿ, ಜ.8: ಪ್ರತಿಯೊಬ್ಬ ನಾಗರಿಕರೂ ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಜಾಗೃತಿಯಿಂದ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮನು ಪಟೇಲ್ ಬಿ.ವೈ ಹೇಳಿದರು. ಅವರು ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಸಹಯೋಗದಲ್ಲಿ ನಡೆದ 37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆ -2026 ಅನ್ನು […]

    The post ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದಾಗ ಅಪಘಾತ ತಡೆಯಲು ಸಾಧ್ಯ: ಮನು ಪಟೇಲ್ ಬಿ.ವೈ appeared first on Namma Udupi Bulletin.



    ಉಡುಪಿ, ಜ.8: ಪ್ರತಿಯೊಬ್ಬ ನಾಗರಿಕರೂ ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಜಾಗೃತಿಯಿಂದ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮನು ಪಟೇಲ್ ಬಿ.ವೈ ಹೇಳಿದರು. ಅವರು ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಸಹಯೋಗದಲ್ಲಿ ನಡೆದ 37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆ -2026 ಅನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನ ಬಹಳ ಮುಂದಿದೆ. ವಾಹನ ಚಲಾಯಿಸುವ ಎಲ್ಲರಿಗೂ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ತಿಳಿದಿರುತ್ತದೆ. ಆದರೆ ಅವುಗಳ ಪಾಲನೆ ಕೊರತೆ ನಮ್ಮಲ್ಲಿದೆ. ಇವುಗಳ ಪಾಲನೇ ಮಾಡದೇ ಇದ್ದಂತಹ ಸಂದರ್ಭದಲ್ಲಿ ರಸ್ತೆ ಅಪಘಾತಗಳು ಉಂಟಾಗಿ ಸಾವು- ನೋವುಗಳು ಸಂಭವಿಸುತ್ತವೆ. ಆದ್ದರಿಂದ ನಾವುಗಳು ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದರು. ಸಾರ್ವಜನಿಕ ರಸ್ತೆಯಲ್ಲಿ ವಾಹನವನ್ನು ಚಲಾಯಿಸುವಾಗ ತಾಳ್ಮೆ ಅಗತ್ಯ. ಅವಸರವಾಗಿ ಅತಿಯಾದ ಆತ್ಮವಿಶ್ವಾಸದೊಂದಿಗೆ ಅಜಾಗರೂಕತೆಯಿಂದ ವಾಹನಗಳನ್ನು ಚಾಲನೆ ಮಾಡಿದಾಗ ಅಪಘಾತಗಳು ಉಂಟಾಗುತ್ತವೆ ಎಂದ ಅವರು, ಎಲ್ಲಾದರೂ ಹೊರಟಾಗ ಮುಂಚಿತವಾಗಿಯೇ ಬಿಟ್ಟರೆ, ಸಮಾಧಾನವಾಗಿ ವಾಹನದ ಚಾಲನೆಯೊಂದಿಗೆ ಸುರಕ್ಷಿತವಾಗಿ ನಿಗಧಿತ ಸ್ಥಳ ತಲುಪಬಹುದು. ಸರಕಾರ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕಾಗಿ ಕೆಲವೊಂದು ನಿಯಮಾವಳಿಗಳನ್ನು ಸುರಕ್ಷತಾ ದೃಷ್ಠಿಯಿಂದ ಜಾರಿಗೊಳಿಸಿದೆ ಎಂದರು.

    ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಮಾತನಾಡಿ, ದೇಶದಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದಕ್ಕೆ ಅನುರೂಪವಾಗಿ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕಾರ್ಯ ನಿಮಿತ್ತ ಮನೆಯಿಂದ ಹೊರಟವರು ಸುರಕ್ಷಿತವಾಗಿ ಮನೆಗೆ ಮರಳಿ ಬರುತ್ತಾರೆ ಎನ್ನುವ ಭರವಸೆ ಇಲ್ಲವಾಗಿದೆ. ಪ್ರಜ್ಞಾವಂತ ನಾಗರಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಸರಿಯಾಗಿ ಪಾಲಿಸಿದಾಗ ಅಪಘಾತಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದರು. ಕಾರ್ಯಕ್ರಮದಲ್ಲಿ ಎಂ.ಐ.ಟಿ ಉಪನ್ಯಾಸಕ ಬಾಲಕೃಷ್ಣ ಮುದ್ದೋಡಿ ಮಾತನಾಡಿ, ನಾವೆಲ್ಲರೂ ಸಮಯದ ಚೌಕಟ್ಟಿನಲ್ಲಿ ನಮ್ಮ ಮತ್ತು ಇತರರ ಜೀವನವನ್ನು ಪಣಕಿಟ್ಟು ಹೋರಾಟ ಮಾಡುತ್ತಿದ್ದೇವೆ. ಜೀವನದ ಹೋರಾಟದಲ್ಲಿ ಇತರರ ಬಗ್ಗೆ ಯೋಚಿಸಲು ನಮಗೆ ಸಮಯಾವಕಾಶ ಇಲ್ಲ. ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ನಮಗೆ ತಿಳಿದಿದ್ದರೂ ನಾವುಗಳೇ ಅದನ್ನು ಪಾಲಿಸದೆ ಉಲ್ಲಂಘಿಸುತ್ತೇವೆ. ಸಂಚಾರಿ ನಿಯಮಗಳನ್ನು ಪಾಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕಾನೂನು ಮತ್ತು ಇಲಾಖೆಗಳು ಅವುಗಳ ಕಾರ್ಯ ಮಾಡುತ್ತಿವೆ. ಆದರೆ ಸಾರ್ವಜನಿಕರು ಕೂಡ ಜವಾಬ್ದಾರಿಯುತವಾಗಿ ನಡೆಯಬೇಕು. ತಮ್ಮ ಮನೆಯ ಆಸು ಪಾಸು, ಶಾಲೆ-ಕಾಲೇಜು ಸಂಘ ಸಂಸ್ಥೆಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿಯನ್ನು ಹಂಚಿಕೊಂಡು ಹೆಚ್ಚಿನ ಜಾಗೃತಿ ಮೂಡಿಸಬೇಕು. ಬದಲಾವಣೆ ಮೊದಲು ನಮ್ಮಿಂದಲೇ ಆದಾಗ ಸಮಾಜದಲ್ಲಿಯೂ ಬದಲಾವಣೆ ಕಾಣುತ್ತದೆ ಎಂದರು.

    ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀನಾರಾಯಣ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದಲ್ಲಿ ಪ್ರತಿ ಎರಡು ನಿಮಿಷಕ್ಕೆ ಒಂದು ಅಪಘಾತ ಸಂಭವಿಸುತ್ತಿದೆ. ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಡೆಯಲು ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಜನರಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲು ಒಂದು ತಿಂಗಳಿನವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರು ವಾಹನಗಳನ್ನು ಚಲಾಯಿಸುವಾಗ ಜಾಗರೂಕರಾಗಿರಬೇಕು ಮತ್ತು ಎಲ್ಲ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದರು.

    ವಾರ್ತಾಧಿಕಾರಿ ಮಂಜುನಾಥ್ ಬಿ ಉಪಸ್ಥಿತರಿದ್ದರು. ಕಛೇರಿ ಅಧೀಕ್ಷಕ ರಾಮಚಂದ್ರಪ್ಪ ಹೆಚ್.ಸಿ ಸ್ವಾಗತಿಸಿ, ಮೋಟಾರು ವಾಹನ ನಿರೀಕ್ಷಕ ಶ್ರೇಯಸ್ ಕುಮಾರ್ ನಿರೂಪಿಸಿ, ಪ್ರಥಮ ದರ್ಜೆ ಸಹಾಯಕ ಗಣೇಶ್ ರಾವ್ ವಂದಿಸಿದರು.

    The post ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದಾಗ ಅಪಘಾತ ತಡೆಯಲು ಸಾಧ್ಯ: ಮನು ಪಟೇಲ್ ಬಿ.ವೈ appeared first on Namma Udupi Bulletin.

    Click here to Read More
    Previous Article
    ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ
    Next Article
    ನಿಸರ್ಗಪ್ರಿಯ ಮಾಧವ ಗಾಡ್ಗೀಳ್ ನಿಧನ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment